HomeKarnatakaವಿದ್ಯಾರ್ಥಿಗಳು, ಪೋಷಕರಿಗೆ ಶಾಕ್: ಎಂಜಿನಿಯರಿಂಗ್ ಕೋರ್ಸ್ ಶುಲ್ಕ ಶೇ. 7.5 ರಷ್ಟು ಹೆಚ್ಚಳ

ವಿದ್ಯಾರ್ಥಿಗಳು, ಪೋಷಕರಿಗೆ ಶಾಕ್: ಎಂಜಿನಿಯರಿಂಗ್ ಕೋರ್ಸ್ ಶುಲ್ಕ ಶೇ. 7.5 ರಷ್ಟು ಹೆಚ್ಚಳ

ಬೆಂಗಳೂರು: ಎಂಜಿನಿಯರಿಂಗ್ ಕೋರ್ಸ್ ಗಳ ಶುಲ್ಕವನ್ನು ಶೇಕಡ 7.5 ರಷ್ಟು ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ.

ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಂಜಿನಿಯರಿಂಗ್ ಕೋರ್ಸ್ ಗಳ ಶುಲ್ಕವನ್ನು 2026 -27 ನೇ ಸಾಲಿಗೆ ಶೇಕಡ 7.5 ರಷ್ಟು ಹೆಚ್ಚಿಸಲು ತೀರ್ಮಾನ ಕೈಗೊಳ್ಳಲಾಗಿದೆ.

ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಶೇಕಡ 10 ರಿಂದ 15 ರವರೆಗೆ ಶುಲ್ಕ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಉಪನ್ಯಾಸಕರು, ಸಿಬ್ಬಂದಿ ವೇತನ, ನಿರ್ವಹಣಾ ವೆಚ್ಚಗಳ ಏರಿಕೆ ಕಾರಣ ಶುಲ್ಕ ಹೆಚ್ಚಳಕ್ಕೆ ಖಾಸಗಿ ಕಾಲೇಜುಗಳು ಮನವಿ ಮಾಡಿದ್ದವು. ಸಭೆಯಲ್ಲಿ ಸುದೀರ್ಘ ಚರ್ಚೆಯ ಬಳಿಕ ಶೇಕಡ 7.5 ರಷ್ಟು ಶುಲ್ಕ ಹೆಚ್ಚಳಕ್ಕೆ ತೀರ್ಮಾನಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರಿಂದ ಟೈಪ್ -1 ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಸಿಇಟಿ ಸೀಟುಗಳ ಶುಲ್ಕ 81,800 ರೂ.ನಿಂದ 87,935 ರೂ.ಗೆ ಏರಿಕೆಯಾಗಲಿದೆ. ಟೈಪ್ -2 ಖಾಸಗಿ ಕಾಲೇಜುಗಳಲ್ಲಿ 91,000 ರೂ.ನಿಂದ 97,825 ರೂ.ಗೆ ಏರಿಕೆಯಾಗಲಿದೆ. ಈ ಶುಲ್ಕದಲ್ಲಿ ವಿಶ್ವವಿದ್ಯಾಲಯ ನೋಂದಣಿ ಇತರೆ ಪ್ರಕ್ರಿಯೆ ಶುಲ್ಕಗಳು ಒಳಗೊಂಡಿರುವುದಿಲ್ಲ.

ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ ಸೀಟು ಪಡೆದ ವಿದ್ಯಾರ್ಥಿಗಳೇ ಈ ಶುಲ್ಕ ಪಾವತಿಸಬೇಕಿದೆ. ವಿಶ್ವವಿದ್ಯಾಲಯಗಳ ಶುಲ್ಕ 10,610 ರೂ. ನಿಗದಿಪಡಿಸಲಾಗಿದೆ. ಕಾಲೇಜುಗಳಿಗೆ ಇತರೆ ಶುಲ್ಕವಾಗಿ ಗರಿಷ್ಠ 20 ಸಾವಿರ ರೂಪಾಯಿ ಪಡೆಯಲು ಅನುಮತಿ ನೀಡಲಾಗಿದೆ.

ಕಳೆದ 2025 -26 ನೇ ಸಾಲಿನಲ್ಲಿ ಎಂಜಿನಿಯರಿಂಗ್ ಕೋರ್ಸ್ ಗಳ ಶುಲ್ಕವನ್ನು ಶೇಕಡ 7.5 ರಷ್ಟು ಹೆಚ್ಚಳ ಮಾಡಲಾಗಿತ್ತು. ಸರ್ಕಾರಿ ಕಾಲೇಜುಗಳ ಸೀಟುಗಳಿಗೆ ಶೇಕಡ 5ರಷ್ಟು ಶುಲ್ಕ ಹೆಚ್ಚಳ ಮಾಡಲಾಗಿತ್ತು. 2026 -27 ನೇ ಸಾಲಿನಲ್ಲಿ ಸರ್ಕಾರಿ ಕಾಲೇಜುಗಳ ಶುಲ್ಕ ಹೆಚ್ಚಳ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular