ಬೆಂಗಳೂರು : ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆ ಮಾಡಿದೆ. ಆದರೆ ನವರಾತ್ರಿ ವೇಳೆಯಲ್ಲೂ ಮಳೆರಾಯ ಬಿಟ್ಟು ಬಿಡದೇ ಕಾಡ್ತಿದ್ದಾನೆ. ರಾಜ್ಯದ ಹಲವು ಕಡೆ ಹಗಲು ರಾತ್ರಿ ಎನ್ನದೇ ಧೋ ಎಂದು ಮಳೆ ಸುರಿಯುತ್ತಿದೆ.
ಮಂಗಳೂರು, ಬೆಳಗಾವಿ, ಬಾಗಲಕೋಟೆ, ಶಿವಮೊಗ್ಗ, ಉಡುಪಿ, ಯಾದಗಿರಿ, ವಿಜಯಪುರ, ಬೀದರ್ ಜಿಲ್ಲೆಗಳಲ್ಲಿ ಮಳೆ ಆರ್ಭಟ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಅ.1 ರಿಂದ ಮಳೆ ಚುರುಕಾಗಲಿದೆ ಎನ್ನಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಸೆಪ್ಟೆಂಬರ್ 30 ರವರೆಗೆ ಚಂಡಮಾರುತದ ಪರಿಣಾಮ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.
You Might Also Like
TAGGED:ನವರಾತ್ರಿ