ಬೆಂಗಳೂರು: ಬೆಂಗಳೂರಿನ ಮಡಿವಾಳದ ಸಂಧ್ಯಾ ಥಿಯೇಟರ್ ನಲ್ಲಿ ಆಘಾತಕಾರಿ ಘಟನೆ ನಡೆದಿದೆ. ಮಹಿಳಾ ಶೌಚಾಲಯದಲ್ಲಿ ಯುವಕನೊಬ್ಬ ರಹಸ್ಯ ಕ್ಯಾಮರಾ ಇಟ್ಟು ವಿಕೃತಿ ಮೆರೆದಿದ್ದಾನೆ.
ಶೌಚಾಲಯಕ್ಕೆ ತೆರಳಿದ್ದ ಮಹಿಳೆಯರು, ಯುವತಿಯರು ಕ್ಯಾಮರಾ ಕಂಡು ಆಘಾತಕ್ಕೊಳಗಾಗಿದ್ದಾರೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳೀಯರು ಕೂಡಲೇ ಕಾರ್ಯ ಪ್ರವೃತ್ತರಾಗಿ ಕ್ಯಾಮರಾ ಇಟ್ಟಿದ್ದ ಆರೋಪಿಯನ್ನು ಹಿಡಿದು ಥಳಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಸಿನಿಮಾ ವೀಕ್ಷಣೆಗೆ ಬಂದಿದ್ದ ಮಹಿಳೆಯರು, ಯುವತಿಯರು ಶೌಚಾಲಯಕ್ಕೆ ತೆರಳಿದಾಗ ರಹಸ್ಯವಾಗಿ ಕ್ಯಾಮೆರಾ ಇಟ್ಟಿರುವುದು ಕಂಡು ಬಂದಿದೆ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತೆರಳಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

