HomeIndiaSHOCKING : 12 ವರ್ಷದ ಮಗನ ಎದುರೇ ತಾಯಿಯ ಮೇಲೆ ಲೈಂಗಿಕ ದೌರ್ಜನ್ಯ, ಖಾಸಗಿ ಅಂಗಗಳಿಗೆ...

SHOCKING : 12 ವರ್ಷದ ಮಗನ ಎದುರೇ ತಾಯಿಯ ಮೇಲೆ ಲೈಂಗಿಕ ದೌರ್ಜನ್ಯ, ಖಾಸಗಿ ಅಂಗಗಳಿಗೆ ಗಾಯಗೊಳಿಸಿದ ದುಷ್ಕರ್ಮಿಗಳು

ತೆಲಂಗಾಣ :  ಮಲಗಿದ್ದ ಮಹಿಳೆಯ ಮೇಲೆ ಆಕೆಯ 12 ವರ್ಷದ ಮಗನ ಎದುರೇ ಲೈಂಗಿಕ ದೌರ್ಜನ್ಯ ಎಸಗಿ, ಬಳಿಕ ಮಹಿಳೆಯ ಖಾಸಗಿ ಅಂಗಗಳಿಗೆ ಗಂಭೀರವಾಗಿ ಗಾಯಗೊಳಿಸಿದ ಘಟನೆ ತೆಲಂಗಾಣದ ನಾರಾಯಣಪೇಟೆ ಜಿಲ್ಲೆಯ ಮಕ್ತಲ್ ಪಟ್ಟಣದಲ್ಲಿ ಗುರುವಾರ ಮುಂಜಾನೆ ನಡೆದಿದೆ.

ಮಕ್ತಲ್ ಪಟ್ಟಣದ ನಿವಾಸಿಯಾಗಿರುವ ಮಹಿಳೆಯೊಬ್ಬರು ಕಳೆದ ಕೆಲವು ವರ್ಷಗಳಿಂದ ತಮ್ಮ 12 ವರ್ಷದ ಮಗನೊಂದಿಗೆ ಒಂಟಿಯಾಗಿ ಜೀವನ ನಡೆಸುತ್ತಿದ್ದಾರೆ. ಜೀವನೋಪಾಯಕ್ಕಾಗಿ ಪಟ್ಟಣದ ಪ್ರಮುಖ ವೃತ್ತಗಳು ಹಾಗೂ ಬಸ್ ನಿಲ್ದಾಣದಲ್ಲಿ ಭಿಕ್ಷಾಟನೆ ಮಾಡುತ್ತಿದ್ದರು. ಕಳೆದ 10 ವರ್ಷಗಳಿಗೂ ಹೆಚ್ಚು ಕಾಲ ರಾತ್ರಿ ವೇಳೆ ಮಕ್ತಲ್ ಸರ್ಕಾರಿ ಜೂನಿಯರ್ ಕಾಲೇಜು ಕಟ್ಟಡದ ಬಳಿ ಆಶ್ರಯ ಪಡೆಯುತ್ತಿದ್ದರು.

ಗುರುವಾರ ಮುಂಜಾನೆ ಇಬ್ಬರು ಅಪರಿಚಿತ ವ್ಯಕ್ತಿಗಳು ಸರ್ಕಾರಿ ಜೂನಿಯರ್ ಕಾಲೇಜು ಕಟ್ಟಡದ ಬಳಿ ತಾಯಿ-ಮಗ ಮಲಗಿದ್ದ ಸ್ಥಳಕ್ಕೆ ತೆರಳಿದ್ದಾರೆ. ಇಬ್ಬರೂ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು ಮುಂದಾದಾಗ ಮಹಿಳೆ ಕಿರುಚಿಕೊಂಡಿದ್ದಾರೆ. ಇದರಿಂದ ಎಚ್ಚರಗೊಂಡ ಆಕೆಯ ಮಗ, ದುಷ್ಕರ್ಮಿಗಳನ್ನು ತಡೆಯಲು ಪ್ರಯತ್ನಿಸಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದರೆ ಮದ್ಯದ ಅಮಲಿನಲ್ಲಿದ್ದ ಆರೋಪಿಗಳು ಬಾಲಕನ ಮೇಲೂ ಹಲ್ಲೆ ಮಾಡಲು ಮುಂದಾಗಿದ್ದಾರೆ. ಇದರಿಂದ ಭಯಗೊಂಡ ಬಾಲಕ ಅಲ್ಲಿಂದ ಓಡಿ ಹೋಗಿದ್ದಾನೆ. ಬಳಿಕ ಇಬ್ಬರು ಆರೋಪಿಗಳು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ನಂತರ ಆಕೆಯ ಖಾಸಗಿ ಅಂಗಗಳಿಗೆ ಗಂಭೀರವಾಗಿ ಗಾಯಗೊಳಿಸಿ ಅಲ್ಲಿಂದ ಪರಾರಿಯಾಗಿದ್ದಾರೆ.

ತೀವ್ರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆಯನ್ನು ಮುಂಜಾನೆ ಮಕ್ತಲ್ ಮಿನಿ ಸ್ಟೇಡಿಯಂ ಮೈದಾನದಲ್ಲಿ ವಾಕಿಂಗ್‌ಗೆ ಬಂದ ಸ್ಥಳೀಯರು ಗಮನಿಸಿದ್ದಾರೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಕ್ತಲ್ ಪೊಲೀಸರು ತಕ್ಷಣ ಸ್ಥಳಕ್ಕೆ ಆಗಮಿಸಿ, ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ತನಿಖೆ ನಡೆಸುತ್ತಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular