HomeKarnatakaಕರ ವಸೂಲಾತಿಯಲ್ಲಿ ನಿರ್ಲಕ್ಷ್ಯ ತೋರಿದ ಪಿಡಿಒಗಳಿಗೆ ಶಾಕ್: ವಾರ್ಷಿಕ ವೇತನ ಬಡ್ತಿಗೆ ತಡೆ

ಕರ ವಸೂಲಾತಿಯಲ್ಲಿ ನಿರ್ಲಕ್ಷ್ಯ ತೋರಿದ ಪಿಡಿಒಗಳಿಗೆ ಶಾಕ್: ವಾರ್ಷಿಕ ವೇತನ ಬಡ್ತಿಗೆ ತಡೆ

ಚಿತ್ರದುರ್ಗ: ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆಂದೋಲನ ಹಮ್ಮಿಕೊಂಡು ತೆರಿಗೆ ವಸೂಲಾತಿ ಮಾಡಿ ಪ್ರಗತಿ ಸಾಧಿಸುವಲ್ಲಿ ನಿರ್ಲಕ್ಷ್ಯ ತೋರಿದ ಮೂವರು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಒಂದು ವಾರ್ಷಿಕ ವೇತನ ಬಡ್ತಿಯನ್ನು ಸಂಚಿತ ಪರಿಣಾಮ ಸಹಿತವಾಗಿ ತಡೆಹಿಡಿಯುವ ದಂಡನೆ ವಿಧಿಸಿ ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಕರ ವಸೂಲಾತಿ ಕುರಿತಂತೆ ಆಂದೋಲನ ಹಮ್ಮಿಕೊಂಡು ತೆರಿಗೆ ವಸೂಲಾತಿಯಲ್ಲಿ ಪ್ರಗತಿ ಸಾಧಿಸುವಂತೆ ಜಿಲ್ಲಾ ಪಂಚಾಯತಿ ವತಿಯಿಂದ ಈ ಹಿಂದೆಯೇ ಸೂಚನೆ ನೀಡಲಾಗಿತ್ತು.  ಅಲ್ಲದೆ ಹಲವು ಸಭೆಗಳನ್ನು ಕೈಗೊಂಡು, ಪತ್ರಗಳ ಮೂಲಕ ಹಾಗೂ ವಿಡಿಯೋ ಸಂವಾದ ಮೂಲಕ ತಿಳಿಸಲಾಗಿತ್ತು.

ಆದರೆ, ಮೂವರು ಗ್ರಾ.ಪಂ. ಪಿಡಿಒಗಳು ಆಯಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆಂದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿಯಲ್ಲಿ ಪ್ರಗತಿ ಸಾಧಿಸಿರಲಿಲ್ಲ. ಚಳ್ಳಕೆರೆ ತಾಲ್ಲೂಕು ದೇವರೆಡ್ಡಿಹಳ್ಳಿ ಗ್ರಾ.ಪಂ. ಪಿಡಿಒ ವೇದವ್ಯಾಸಲು ಅವರು ಕರ ವಸೂಲಾತಿಯಲ್ಲಿ ಶೇ. 27.88 ರಷ್ಟು, ಹಿರೇಹಳ್ಳಿ ಗ್ರಾ.ಪಂ. ಪಿಡಿಒ ನರಸಿಂಹಪ್ಪ ಶೇ. 37.77 ಹಾಗೂ ಹೊಸದುರ್ಗ ತಾಲ್ಲೂಕು ಗುಡ್ಡದ ನೇರಲೆಕೆರೆ ಗ್ರಾ.ಪಂ. ಪಿಡಿಒ ಕುಮಾರ್ ಸಿಂಗ್ ಬಿ.ಎಲ್. ಅವರು ಕೇವಲ ಶೇ. 36.68 ರಷ್ಟು ಮಾತ್ರ ತೆರಿಗೆ ವಸೂಲಾತಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇವರು ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿ ಜಿಲ್ಲೆಯ ಪ್ರಗತಿ ಕುಂಠಿತಗೊಳ್ಳಲು ಕಾರಣರಾಗಿದ್ದನ್ನು ಪರಿಗಣಿಸಿ ಕಾರಣ ಕೇಳಿ ಪಿಡಿಒಗಳಿಗೆ ನೋಟಿಸ್ ನೀಡಲಾಗಿತ್ತು, ಈ ನೋಟಿಸ್‍ಗೆ ಸೂಕ್ತ ಸಮಜಾಯಿಷಿ ಸಲ್ಲಿಸಿರುವುದಿಲ್ಲ. ಹೀಗಾಗಿ ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ವಹಿಸಿ ಪ್ರಗತಿಗೆ ಕುಂಠಿತರಾಗಲು ಕಾರಣರಾದ ಈ ಮೂವರು ಪಿಡಿಒಗಳಿಗೆ ಒಂದು ವಾರ್ಷಿಕ ವೇತನ ಬಡ್ತಿಯನ್ನು ಸಂಚಿತ ಪರಿಣಾಮ ಸಹಿತವಾಗಿ ತಡೆಹಿಡಿಯುವ ದಂಡನೆ ವಿಧಿಸಿ ಆದೇಶಿಸಲಾಗಿದೆ ಎಂದು ಜಿ.ಪಂ. ಸಿಇಒ ಸೋಮಶೇಖರ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular