ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಶಂಕರಿಕೊಪ್ಪ ಗ್ರಾಮದಲ್ಲಿ ನಿಶ್ಚಿತಾರ್ಥದ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಯುವತಿ ಶಾಕ್ ನೀಡಿದ್ದಾಳೆ. ರಾತ್ರೋರಾತ್ರಿ ಅನ್ಯಕೋಮಿನ ಯುವಕನೊಂದಿಗೆ ಪರಾರಿಯಾಗಿದ್ದು, ಲವ್ ಜಿಹಾದ್ ಆರೋಪ ಕೇಳಿ ಬಂದಿದೆ.
ಏಪ್ರಿಲ್ 26ರಂದು ಗ್ರಾಮದ ಯುವತಿಯ ನಿಶ್ಚಿತಾರ್ಥ ನಿಗದಿಯಾಗಿತ್ತು. ಕುಟುಂಬದರು ಸಕಲ ಸಿದ್ಧತೆ ಮಾಡಿಕೊಂಡಿದ್ದರು. ಆದರೆ, ಶನಿವಾರ ರಾತ್ರಿ ನರೇಗಲ್ ಗ್ರಾಮದ ಇಬ್ರಾಹಿಂ ಎಂಬ ಯುವಕನೊಂದಿಗೆ ಯುವತಿ ಹೋಗಿದ್ದಾಳೆ.
ತಮ್ಮ ಮಗಳನ್ನು ಇಬ್ರಾಹಿಂ ಕರೆದುಕೊಂಡು ಹೋಗಿದ್ದಾನೆ ಎಂದು ಪೋಷಕರು ಆರೋಪಿಸಿ ಆಡೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಇದು ಲವ್ ಜಿಹಾದ್ ಪ್ರಕರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉದ್ದೇಶಪೂರ್ವಕವಾಗಿ ನಡೆದ ಕೃತ್ಯ ಇದಾಗಿದ್ದು, ಪೊಲೀಸರು ಕೂಡಲೇ ಯುವತಿಯನ್ನು ಪತ್ತೆ ಹಚ್ಚಿ ಕುಟುಂಬಕ್ಕೆ ಒಪ್ಪಿಸಬೇಕು. ಇಬ್ರಾಹಿಂ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

