ಬೆಂಗಳೂರು: ರಾಜ್ಯದ ಬಿಎಡ್ ಕಾಲೇಜುಗಳ ಶುಲ್ಕ ಪರಿಷ್ಕರಣೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಕಾಂಗ್ರೆಸ್ ನ ಮಧು ಜಿ. ಮಾದೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದ ಬಿಎಡ್ ಕಾಲೇಜುಗಳ ಶುಲ್ಕ ಪರಿಷ್ಕರಣೆ ಅನೇಕ ವರ್ಷಗಳಿಂದ ಆಗಿಲ್ಲ. ಬೇರೆ ಬೇರೆ ರಾಜ್ಯದಲ್ಲಿ ಬಿಎಡ್ ಕಾಲೇಜುಗಳ ಶುಲ್ಕ ಜಾಸ್ತಿ ಇದೆ. ರಾಜ್ಯದಲ್ಲಿಯೂ ಶುಲ್ಕ ಪರಿಷ್ಕರಣಿಗೆ ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.
ಬಿಎಡ್ ಕಾಲೇಜುಗಳ ಶುಲ್ಕ ಪರಿಷ್ಕರಣೆ ಬಗ್ಗೆ ಉನ್ನತ ಶಿಕ್ಷಣ ಇಲಾಖೆ ಸದಸ್ಯರ ಸಮಿತಿ ರಚನೆ ಮಾಡಲಾಗಿದೆ. ಸಮಿತಿ ವರದಿ ಬಂದ ಬಳಿಕ ಬಿಎಡ್ ಕಾಲೇಜುಗಳ ಶುಲ್ಕ ಪರಿಷ್ಕರಿಸಲಾಗುವುದು. ಈ ಶೈಕ್ಷಣಿಕ ವರ್ಷವೇ ಶುಲ್ಕ ಪರಿಷ್ಕರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

