ಭುವನೇಶ್ವರದಲ್ಲಿ 19 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಅಧ್ಯಕ್ಷ ಉದಿತ್ ಪ್ರಧಾನ್ ರನ್ನು ಬಂಧಿಸಲಾಗಿದೆ.
ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಈ ಬಂಧನ ನಡೆದಿದೆ. ಮಾರ್ಚ್ನಲ್ಲಿ ಹೋಟೆಲ್ ಕೋಣೆಯಲ್ಲಿ ತನ್ನ ಮೇಲೆ ಮಾದಕ ದ್ರವ್ಯ ನೀಡಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಸಂತ್ರಸ್ತೆ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ.
ಪ್ರಧಾನ್ ತನ್ನನ್ನು ಔತಣಕೂಟಕ್ಕೆ ಆಹ್ವಾನಿಸಿ ತಂಪು ಪಾನೀಯ ನೀಡಿದ್ದಾಗಿ ಆಕೆ ಪೊಲೀಸರಿಗೆ ತಿಳಿಸಿದ್ದಾಳೆ, ಅದರಲ್ಲಿ ಮಾದಕ ದ್ರವ್ಯ ಮಿಶ್ರಣವಿತ್ತು ಎಂದು ಅವಳು ಹೇಳಿದ್ದಾಳೆ. ಸೋಮವಾರ ಮಧ್ಯಾಹ್ನ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಉದಿತ್ ಪ್ರಧಾನ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್), 2023 ರ ಸೆಕ್ಷನ್ 64(1), ಸೆಕ್ಷನ್ 123, ಸೆಕ್ಷನ್ 296, ಸೆಕ್ಷನ್ 74, ಸೆಕ್ಷನ್ 351(2) ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
TAGGED:NSUI