ಬಳ್ಳಾರಿ : ಬಳ್ಳಾರಿಯಲ್ಲಿ ಘೋರ ದುರಂತ ಸಂಭವಿಸಿದ್ದು, ಚರಂಡಿಗೆ ಬಿದ್ದು 4 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಬಳ್ಳಾರಿ ಜಿಲ್ಲೆ ಕುರೇಕುಪ್ಪ ಗ್ರಾಮದಲ್ಲಿ ನಡೆದಿದೆ.
ಮನೆ ಮುಂದೆ ಆಟವಾಡುತ್ತಿದ್ದ ಬಾಲಕ ಅರವಿಂದ್ ಚರಂಡಿಗೆ ಬಿದ್ದು ಮೃತಪಟ್ಟಿದ್ದಾನೆ. ಚರಂಡಿಗೆ ಬಿದ್ದು ಒದ್ದಾಡಿ ಮಗು ಮೃತಪಟ್ಟಿದೆ ಎನ್ನಲಾಗಿದೆ. ಪೋಷಕರು ಎಲ್ಲಾ ಕಡೆ ಹುಡುಕಿದ್ದಾನೆ. ನಂತರ ಚರಂಡಿಯಲ್ಲಿ ಬಾಲಕನ ಶವ ಪತ್ತೆಯಾಗಿದೆ.
ಮಗು ಒದ್ದಾಡಿ ಪ್ರಾಣಬಿಟ್ಟ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮನೆ ಮುಂದೆ ಆಟವಾಡುತ್ತಿದ್ದ ಬಾಲಕ ಚರಂಡಿಗೆ ಬಿದ್ದಿದ್ದಾನೆ. ಮಗನನ್ನು ಕಳೆದುಕೊಂಡ ತಂದೆ-ತಾಯಿ ಆಕ್ರಂದನ ಮುಗಿಲು ಮುಟ್ಟಿದೆ.