ಬೆಳಗಾವಿ: ಬೆಳಗಾವಿಯಲ್ಲಿ ಕಾಮುಕರು ಅಟ್ಟಹಾಸ ಮೆರೆದಿದ್ದು, ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.
ಬೆಳಗಾವಿ ತಾಲೂಕಿನ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರು ಜನ ಕಾಮುಕರು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಆರು ತಿಂಗಳ ಹಿಂದೆ ಸಾಮೂಹಿಕ ಅತ್ಯಾಚಾರ ನಡೆಸಿ ವಿಡಿಯೋ ಮಾಡಿಕೊಂಡಿದ್ದ ದುಷ್ಕರ್ಮಿಗಳು ವಿಡಿಯೋ ತೋರಿಸಿ ಬ್ಲಾಕ್ ಮೇಲ್ ಮಾಡಿ ಮತ್ತೊಮ್ಮೆ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದ್ದು, ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಕೇಸ್ ದಾಖಲದ ಒಂದೇ ದಿನದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಎ1 ಆರೋಪಿ ಸೇರಿ ಇನ್ನುಳಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ವಾರದ ಹಿಂದೆ ರೆಸಾರ್ಟ್ ವೊಂದರಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್ ನಡೆದಿದೆ. ಈ ಪ್ರಕರಣದಲ್ಲಿ ಇಬ್ಬರು ಬಾಲಾಪರಾಧಿಗಳು ಸೇರಿ ಐವರ ಬಂಧನವಾಗಿತ್ತು.