HomeLatest NewsSHOCKING : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ : ಮಲಗಿದ್ದ ಹಸುವಿನ ಕೆಚ್ಚಲು ಕೊಯ್ದು ವಿಕೃತಿ...

SHOCKING : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ : ಮಲಗಿದ್ದ ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಕಿಡಿಗೇಡಿಗಳು.!

ಬಾಗಲಕೋಟೆ : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಮಲಗಿದ್ದ ಹಸುವಿನ ಕೆಚ್ಚಲು ಕೊಯ್ದು ಕಿಡಿಗೇಡಿಗಳು ವಿಕೃತಿ ಮೆರೆದ ಘಟನೆ ಬಾಗಲಕೋಟೆಯ ಕುಳಗೇರಿ ಕ್ರಾಸ್ ನಲ್ಲಿ ನಡೆದಿದೆ.

ಗ್ರಾಮದ ಭರಮಪ್ಪ ಕುರಿ ಎಂಬುವವರು ಸಾಕಿದ ಹಸುವಿನ ಕೆಚ್ಚಲು ಕೊಯ್ದು ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. ಹಸುವಿನ ಕೆಚ್ಚಲಿನಿಂದ ರಕ್ತಸ್ರಾವ ಆಗುತ್ತಿರುವುದನ್ನು ಗಮನಿಸಿದ ಮನೆಯವರು ಹಸುವನ್ನು ಪಶು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ಘಟನೆ ನಡೆದ ಕುಳಗೇರಿ ಉಪಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂಕ ಪ್ರಾಣಿಯ ಕೆಚ್ಚಲು ಕತ್ತರಿಸಿದ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular