SHOCKING : ಹಾನಗಲ್ ಗ್ಯಾಂಗ್’ರೇಪ್ ಆರೋಪಿಗಳಿಂದ ರಸ್ತೆಯಲ್ಲಿ ಭರ್ಜರಿ ರೋಡ್ ಶೋ, ವ್ಯಾಪಕ ಆಕ್ರೋಶ |WATCH VIDEO

ಹಾವೇರಿ : ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ 7 ಆರೋಪಿಗಳಿಗೆ ಜಾಮೀನು ಮಂಜೂರಾಗಿದ್ದು, ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆಯೇ ರೋಡ್ ಶೋ ನಡೆಸಿದ್ದು, ವೀಡಿಯೋ ವೈರಲ್ ಆಗಿದೆ.

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿ ಆಲೂರು ಪಟ್ಟಣದಲ್ಲಿ ಆರೋಪಿಗಳು 5 ಕಾರುಗಳಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.

ಹಲವಾರು ಕಾರುಗಳು ಮತ್ತು ಬೈಕ್ಗಳನ್ನು ಒಳಗೊಂಡಿದ್ದ ಮೆರವಣಿಗೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಈ ಘಟನೆ ವ್ಯಾಪಕ ಖಂಡನೆಗೆ ಗುರಿಯಾಯಿತು.

ಮೂರು ದಿನಗಳ ಹಿಂದೆ ಆರೋಪಿಗಳಿಗೆ ಜಾಮೀನು ಸಿಕ್ಕಿದ್ದು, ಹಾವೇರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ಸಂತ್ರಸ್ತೆ ಆರೋsನು ಮಂಜೂರು ಮಾಡಿತ್ತು. ಆರೋಪಿ ಅಪ್ತಾಬ್ ಚಂದನಕಟ್ಟಿ, ಮದರ್ ಸಾಬ್ ಮಂಡಕ್ಕಿ, ಸಮೀವುಲ್ಲಾ ಲಾಲನವರ್, ಮಹಮ್ಮದ್ ಸಾದಿಕ್, ಶೋಯಿಬ್ ಮುಲ್ಲಾ, ತೌಸಿಪ್ ಚೋಟಿ, ರಿಯಾಜ್ ಸಾವಿಕೇರಿಗೆ ಜಾಮೀನು ಮಂಜೂರಾಗಿದೆ.2024ರ ಜ.8ರಂದು ಹಾನಗಲ್ ಹೊರವಲಯದಲ್ಲಿ ಗ್ಯಾಂಗ್ ರೇಪ್ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಜೈಲು ಸೇರಿದ್ದ 19 ಆರೋಪಿಗಳಲ್ಲಿ 12 ಆರೋಪಿಗಳು ಹತ್ತು ತಿಂಗಳ ಹಿಂದೆಯೇ ಜಾಮೀನು ಪಡೆದಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read