ಚಾಮರಾಜನಗರ: ಹಣ್ಣು ಎಂದು ತಿಳಿದು ವಿಷದ ಕಾಯಿ ತಿಂದು 12 ಮಕ್ಕಳು ಅಸ್ವಸ್ಥರಾದ ಘಟನೆ ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಯರಿಯೂರಿನಲ್ಲಿ ನಡೆದಿದ್ದು, ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಭಾನುವಾರ ಸಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭತ್ತ ಕಟಾವು ಮಾಡಲು ಯಳಂದೂರು ತಾಲೂಕಿನ ಯರಿಯೂರಿಗೆ ಬಂದಿದ್ದ ಕಾರ್ಮಿಕರ ಮಕ್ಕಳು ವಿಷದ ಕಾಯಿ ತಿಂದು ಅಸ್ವಸ್ಥರಾಗಿದ್ದಾರೆ. ಆಟವಾಡುತ್ತಿದ್ದ ಮಕ್ಕಳು ಹಣ್ಣು ಎಂದು ತಿಳಿದು ಮರಳೆಕಾಯಿ ತಿಂದಿದ್ದು, ಮಕ್ಕಳು ವಾಂತಿ ಮಾಡಿಕೊಂಡಿದ್ದಾರೆ. ಇದರಿಂದ ಗಾಬರಿಯಾದ ಪೋಷಕರು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಯಳಂದೂರು ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಚಾಮರಾಜನಗರ ಸಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.