ಬೆಂಗಳೂರು : ಬೆಂಗಳೂರಿನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬೆನ್ನಲ್ಲೇ ದಕ್ಷಿಣ ಜಿಲ್ಲೆಯ ತಾವರೆಕೆರೆಯಲ್ಲಿ 14 ವರ್ಷದ ಬಾಲಕಿಯನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಮನೆಯಲ್ಲಿ ಒಬ್ಬಂಟಿಯಾಗಿದ್ದ ಇದ್ದ 15 ವರ್ಷದ ಬಾಲಕಿ ಕೊಲೆಯಾಗಿದ್ದಾಳೆ. ತಂದೆ-ತಾಯಿ ಇಬ್ಬರು ಮನೆಯಲ್ಲಿ ಇರದೇ ಇರುವುದನ್ನ ಗಮನಿಸಿದ ಕಿರಾತಕರು ಬಾಲಕಿ ಮನೆಗೆ ನಿಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಬಾಲಕಿಯನ್ನು ಹತ್ಯೆ ಮಾಡಿದ್ದಾರೆ.
ಬಾಲಕಿ ದೇಹದ ಮೇಲೆ ಗಾಯದ ಗುರುತುಗಳು ಕಂಡು ಬಂದಿದ್ದು, ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
You Might Also Like
TAGGED:ಅತ್ಯಾಚಾರ