ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾನಳ್ಳಿಯಲ್ಲಿ ಹೃದಯಘಾತದಿಂದ 15 ವರ್ಷ ಬಾಲಕ ಸಾವನ್ನಪ್ಪಿದ್ದಾನೆ.
ಪ್ರೀತಮ್(15) ಮೃತಪಟ್ಟ ಬಾಲಕ ಎಂದು ಹೇಳಲಾಗಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಪ್ರೀತಮ್ ಗೆ ಎದೆನೋವು ಕಾಣಿಸಿಕೊಂಡು ಏಕಾಏಕಿ ರಸ್ತೆಯಲ್ಲಿ ಕುಸಿದು ಬಿದ್ದಿದ್ದಾನೆ. ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಖಚಿತಪಡಿಸಿದ್ದಾರೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.