ವಿಶಾಖಪಟ್ಟಣಂ : ಇಲ್ಲಿಂದ ಸುಮಾರು 66 ಕಿ.ಮೀ ದೂರದಲ್ಲಿರುವ ಯಲಮಂಚಿಲಿಯಲ್ಲಿ ಟಾಟಾನಗರ-ಎರ್ನಾಕುಲಂ ಎಕ್ಸ್ಪ್ರೆಸ್ನ ಎರಡು ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಓರ್ವ ವ್ಯಕ್ತಿ ಸಜೀವವಾಗಿ ದಹನಗೊಂಡಿದ್ದಾರೆ.
ಈ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ಮಾಹಿತಿ ನೀಡಿದ್ದಾರೆ. ಅಗ್ನಿ ಅವಘಡ ಸಂಭವಿಸಿದ ನಮಗೆ ಮಧ್ಯರಾತ್ರಿ 12:45 ಕ್ಕೆ ಮಾಹಿತಿ ಸಿಕ್ಕಿತು ಎಂದು ಅಧಿಕಾರಿ ತಿಳಿಸಿದ್ದಾರೆ. ರೈಲು ಬೆಂಕಿ ಹೊತ್ತಿಕೊಂಡಾಗ ಒಂದು ಬೋಗಿಯಲ್ಲಿ 82 ಪ್ರಯಾಣಿಕರು ಮತ್ತು ಇನ್ನೊಂದು ಬೋಗಿಯಲ್ಲಿ 76 ಪ್ರಯಾಣಿಕರು ಇದ್ದರು ಎಂದು ಅಧಿಕಾರಿ ವರದಿಗಾರರಿಗೆ ತಿಳಿಸಿದರು. “ದುರದೃಷ್ಟವಶಾತ್, ಬಿ 1 ಬೋಗಿಯಿಂದ ಮೃತದೇಹ ಪತ್ತೆಯಾಗಿದೆ” . ಮೃತರನ್ನು ಚಂದ್ರಶೇಖರ್ ಸುಂದರಂ ಎಂದು ಗುರುತಿಸಲಾಗಿದೆ ಎಂದು ಅಧಿಕಾರಿ ಹೇಳಿದರು.
2 ಬೋಗಿಗಳು ಸುಟ್ಟು ಭಸ್ಮ
ಹಾನಿಗೊಳಗಾದ ಎರಡು ಬೋಗಿಗಳನ್ನು ರೈಲಿನಿಂದ ಬೇರ್ಪಡಿಸಲಾಗಿದ್ದು, ಅದು ಎರ್ನಾಕುಲಂ ಕಡೆಗೆ ಸಾಗುತ್ತಿದೆ. ಹಾನಿಗೊಳಗಾದ ಬೋಗಿಗಳಲ್ಲಿರುವ ಪ್ರಯಾಣಿಕರನ್ನು ಅವರ ಸ್ಥಳಗಳಿಗೆ ಕಳುಹಿಸಲಾಗುತ್ತದೆ. ಬೆಂಕಿಯ ಕಾರಣವನ್ನು ಕಂಡುಹಿಡಿಯಲು ಎರಡು ವಿಧಿವಿಜ್ಞಾನ ತಂಡಗಳು ಕಾರ್ಯನಿರ್ವಹಿಸುತ್ತಿವೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
WATCH VIDEO

