HomeLatest NewsSHCOKING: ರಾತ್ರಿ ಊಟ ಸೇವಿಸಿದ 8 ಜನ ಅಸ್ವಸ್ಥ: ಮೂವರು ಗಂಭೀರ: ಆಹಾರದಲ್ಲಿ ವಿಷಪ್ರಾಶನ ಶಂಕೆ

SHCOKING: ರಾತ್ರಿ ಊಟ ಸೇವಿಸಿದ 8 ಜನ ಅಸ್ವಸ್ಥ: ಮೂವರು ಗಂಭೀರ: ಆಹಾರದಲ್ಲಿ ವಿಷಪ್ರಾಶನ ಶಂಕೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ದೇವರೆಡ್ಡಿಪಲ್ಲಿ ಗ್ರಾಮದಲ್ಲಿ ಊಟ ಮಾಡಿದ ಎಂಟು ಜನ ಅಸ್ವಸ್ಥರಾಗಿದ್ದು, ಮೂವರು ಗಂಭೀರ ಸ್ಥಿತಿಯಲ್ಲಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ದೇವರೆಡ್ಡಿಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ಮದ್ದಿರೆಡ್ಡಿ ಭಾಗ್ಯಮ್ಮ, ಮಣಿ, ಸುಬ್ರಮಣಿ, ಈಶ್ವರಮ್ಮ, ಮದ್ದಕ್ಕ, ಮಂಜುನಾಥ ಸೇರಿ 8 ಮಂದಿ ಅಸ್ವಸ್ಥರಾಗಿದ್ದಾರೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಮನೆಗೆ ಬಂದು ಸಾಂಬಾರ್ ಗೆ ವಿಷಪ್ರಾಶನ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಅಸ್ವಸ್ಥರನ್ನು ಬಾಗೇಪಲ್ಲಿ ಮತ್ತು ಚಿಕ್ಕಬಳ್ಳಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಕುಶಾಶಲ್ ಚೌಕ್ಸೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular