SHOCKING : ಜೋಕಾಲಿ ಆಡುವಾಗ ಕುತ್ತಿಗೆಗೆ ಹಗ್ಗ ಸಿಲುಕಿ 3 ನೇ ತರಗತಿ ಬಾಲಕಿ ಸಾವು.!

ಬಂಟ್ವಾಳ : ಜೋಕಾಲಿ ಆಡುವಾಗ ಕುತ್ತಿಗೆಗೆ ಹಗ್ಗ ಸಿಲುಕಿ 3 ನೇ ತರಗತಿ ಬಾಲಕಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪರಾಜಿ ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕಿಯನ್ನು ತೀರ್ಥಶ್ರೀ ಎಂದು ಗುರುತಿಸಲಾಗಿದೆ. 3 ನೇ ತರಗತಿ ಓದುತ್ತಿದ್ದ ಬಾಲಕಿ ಭಾನುವಾರ ನಿನ್ನೆ ರಜೆ ಇದ್ದರಿಂದ ಮನೆಯಲ್ಲಿ ಜೋಕಾಲಿ ಆಟವಾಡಲು ಹೋಗಿದ್ದಾಳೆ.

ಜೋಕಾಲಿಗೆ ಕಟ್ಟಿದ್ದ ಹಗ್ಗ ಕುತ್ತಿಗೆಗೆ ಸಿಲುಕಿಕೊಂಡು ಅದರಿಂದ ಬಿಡಿಸಿಕೊಳ್ಳಲಾಗದೇ ಬಾಲಕಿ ಮೃತಪಟ್ಟಿದ್ದಾಳೆ. ಮೃತ ಬಾಲಕಿಯ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read