SHOCKING : ಬೆಂಗಳೂರಿನಲ್ಲಿ ಶಾಕಿಂಗ್ ಘಟನೆ ; ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆಗೆ ಶರಣು.!

ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಮುದ್ದಿನಪಾಳ್ಯದಲ್ಲಿ ನಡೆದಿದ್ದು, ವ್ಯಕ್ತಿ ಸಜೀವ ದಹನವಾಗಿದ್ದಾರೆ.

ನಿನ್ನೆ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರ್ ನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿಯ ಶವಪತ್ತೆಯಾಗಿತ್ತು. ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಹೋಗಿದ್ದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಿತ್ತು, ನಂತರ ಪೊಲೀಸರು ತನಿಖೆ ನಡೆಸಿದಾಗ ಅಸಲಿ ವಿಚಾರ ಬಯಲಾಗಿದೆ.

ನಾಗರಬಾವಿ 2 ನೇ ಹಂತದ ನಿವಾಸಿ ಪ್ರದೀಪ್ (42) ಆತ್ನಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮುದ್ದಿನಪಾಳ್ಯದಲ್ಲಿ ಕಾರು ನಿಲ್ಲಿಸಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರದೀಪ್ ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಪೊಲೀಸರು ಅವರ ಕುಟುಂಬದವರ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read