ಬೆಂಗಳೂರು : ರಸ್ತೆಯಲ್ಲಿ ಮಲಗಿದ್ದ ನಾಯಿ ಮೇಲೆ ಕಾರು ಹತ್ತಿಸಿ ಚಾಲಕ ವಿಕೃತಿ ಮೆರೆದಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ.
ಜುಲೈ 13 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಸ್ತೆ ಪಕ್ಕದಲ್ಲಿ ತನ್ನ ಪಾಡಿಗೆ ಮಲಗಿದ್ದ ನಾಯಿ ಮೇಲೆ ಕಾರು ಚಾಲಕ ಏಕಾಏಕಿ ಕಾರು ಹತ್ತಿಸಿ ಹೋಗಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡ ನಾಯಿ ನರಳಾಡಿದೆ. ಚಾಲಕನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

