SHOCKING : ಪ್ರೀತಿಗೆ ಒಲ್ಲೆ ಎಂದ ವಿದ್ಯಾರ್ಥಿನಿಯನ್ನು ಕತ್ತು ಕೊಯ್ದು ಕೊಂದ ‘ಪಾಗಲ್ ಪ್ರೇಮಿ’

ಹಾಸನ: ಪ್ರೇಮ ನಿವೇದನೆಗೆ ನಿರಾಕರಿಸಿದ್ದಕ್ಕೆ 20 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿಯನ್ನು 23 ವರ್ಷದ ಯುವಕನೊಬ್ಬ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ.

ಮೃತರನ್ನು ಹಾಸನ ಜಿಲ್ಲೆಯ ಮೊಸಳೆ ಹೊಸಹಳ್ಳಿಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿನಿ ಸುಚಿತ್ರಾ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಅದೇ ಎಂಜಿನಿಯರಿಂಗ್ ಕಾಲೇಜಿನ ಹಳೆಯ ವಿದ್ಯಾರ್ಥಿ ತೇಜಸ್ ಎಂದು ಗುರುತಿಸಲಾಗಿದ್ದು, ಗುರುವಾರ ಹಾಸನ ಬಳಿಯ ಕುಂತಿ ಬೆಟ್ಟಕ್ಕೆ ಕರೆದೊಯ್ದು ಕೊಲೆ ಮಾಡಿದ್ದಾನೆ ಎಂದು ವರದಿಗಳು ತಿಳಿಸಿದೆ.

ಸುಚಿತ್ರಾ ಅವರ ತಂದೆ ಬೆಂಗಳೂರಿನಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಸುಚಿತ್ರಾ ಕುಟುಂಬ ಒತ್ತಾಯಿಸಿದೆ. ಸುಚಿತ್ರಾ ಅವರ ತಂದೆ ಚಾಲಕರಾಗಿ ಕೆಲಸ ಮಾಡುತ್ತಿದ್ದರು ಮತ್ತು ತಾಯಿ ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ನನ್ನ ಸಹೋದರನಿಗೆ ಇಬ್ಬರು ಹೆಣ್ಣುಮಕ್ಕಳಿದ್ದರು. ಅವಳು ಹಿರಿಯ ಮಗಳು. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು” ಎಂದು ಸುಚಿತ್ರಾ ಅವರ ಚಿಕ್ಕಪ್ಪ ಅಶ್ವತ್ಥ್ ಆಗ್ರಹಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read