ಚಿಕ್ಕಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಮರ್ಮಾಂಗಕ್ಕೆ ಒದ್ದು ಸ್ನೇಹಿತನನ್ನು ಕೊಲೆ ಮಾಡಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಸಮೀಪ ನಡೆದಿದೆ.
ಅಸ್ಸಾಂ ಮೂಲದ ಕಾರ್ಮಿಕ ಮೋಹನ್(34) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ರೆಸಾರ್ಟ್ ವೊಂದರಲ್ಲಿ ಮೋಹನ್ ಕೆಲಸ ಮಾಡುತ್ತಿದ್ದ. ನಿನ್ನೆ ರಾತ್ರಿ ಕುಡಿದು ಆರೋಪಿಗಳು ಗಲಾಟೆ ಮಾಡಿಕೊಂಡಿದ್ದರು.ಈ ವೇಳೆ ಮರ್ಮಾಂಗಕ್ಕೆ ಒದ್ದು ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ. ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.