SHOCKING : ಸಾಕಲು ಆಗಲ್ಲ ಎಂದು ಪತ್ನಿ, 7 ಮಕ್ಕಳನ್ನು ಕೊಡಲಿಯಿಂದ ಕೊಚ್ಚಿ ಕೊಂದ ವ್ಯಕ್ತಿ..!

ಲಾಹೋರ್ : ಪಾಕಿಸ್ತಾನದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಏಳು ಮಕ್ಕಳನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಗುರುವಾರ ನಡೆದಿದೆ.

ಪೊಲೀಸ್ ಅಧಿಕಾರಿಗಳ ಪ್ರಕಾರ, ಆ ವ್ಯಕ್ತಿ ತನ್ನ ಕುಟುಂಬವನ್ನು ಸಾಕಲು ಸಾಧ್ಯವಾಗದ ಕಾರಣ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಸಜ್ಜಾದ್ ಖೋಖರ್ ಎಂಬ ಕಾರ್ಮಿಕ ತನ್ನ ಪತ್ನಿ ಕೌಸರ್ (42) ಮತ್ತು ಅವರ ಏಳು ಮಕ್ಕಳ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿದ್ದಾನೆ.

ಎಂಟು ತಿಂಗಳಿನಿಂದ 10 ವರ್ಷದೊಳಗಿನ ನಾಲ್ವರು ಹೆಣ್ಣುಮಕ್ಕಳು ಮತ್ತು ಮೂವರು ಗಂಡು ಮಕ್ಕಳನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಲಾಗಿದೆ.ಹಣಕಾಸಿನ ಆರ್ಥಿಕ ಒತ್ತಡದಿಂದಾಗಿ ವ್ಯಕ್ತಿ ಮಾನಸಿಕವಾಗಿ ಕುಗ್ಗಿದ್ದನು, ಆಗಾಗ್ಗೆ ತನ್ನ ಹೆಂಡತಿಯೊಂದಿಗೆ ಜಗಳವಾಡುತ್ತಿದ್ದನು ಎಂದು ಪೊಲೀಸರು ಹೇಳಿದ್ದಾರೆ.

ಪ್ರಕರಣ ಸಂಬಂಧ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಆತನ ಕುಟುಂಬದ ಕೊಲೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆತ ತಾನು ಮಾಡಿರುವು ಕೃತ್ಯವನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ತನ್ನ ಹೆಂಡತಿ ಮತ್ತು ಏಳು ಮಕ್ಕಳನ್ನು ಕೊಂದಿದ್ದಾಗಿ ವ್ಯಕ್ತಿ ಒಪ್ಪಿಕೊಂಡಿದ್ದಾನೆ ಮತ್ತು ಇನ್ನು ಮುಂದೆ ತನ್ನ ಕುಟುಂಬವನ್ನು ಪೋಷಿಸಲು ಸಾಧ್ಯವಾಗದ ಕಾರಣ ಹಾಗೆ ಮಾಡಿದ್ದೇನೆ ಎಂದು  ತಪ್ಪೊಪ್ಪಿಕೊಂಡಿದ್ದಾನೆ ಎಂದು  ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read