ಶಿವಮೊಗ್ಗ: ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿದೆ. ಶಿವಮೊಗ್ಗ ಜಿಲ್ಲೆ ಸಾಗರದ ಜನ್ನತ್ ನಗರದಲ್ಲಿ ಘಟನೆ ನಡೆದಿದೆ.
ಮೂರು ವರ್ಷದ ಬಾಲಕನ ಮುಖ ಸೇರಿದಂತೆ ದೇಹದ ಹಲವು ಕಡೆಗಳಲ್ಲಿ ಬೀದಿನಾಯಿ ಕಚ್ಚಿ ಗಾಯಗೊಳಿಸಿದೆ. ಸಾಗರದಲ್ಲಿ ಪ್ರಾಥಮಿಕ ಚಿಕಿತ್ಸೆಯ ನಂತರ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಬಾಲಕನಿಗೆ ಕಚ್ಚಿದ ಬಳಿಕ ಮತ್ತೊಬ್ಬ ಮಹಿಳೆಯ ಮೇಲೆಯೂ ಬೀದಿ ನಾಯಿ ದಾಳಿ ಮಾಡಿದೆ. ಸಾಗರ ನಗರಸಭೆಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೀದಿ ನಾಯಿಗಳ ಹಾವಳಿ ನಿಯಂತ್ರಿಸಬೇಕೆಂದು ನಿವಾಸಿಗಳು ಒತ್ತಾಯಿಸಿದ್ದಾರೆ.