ಬೀದರ್: ಶಿವರಾತ್ರಿಗೆ ಚಂದಾ ಹಣ ನೀಡದಿದ್ದಕ್ಕೆ ಯುವಕನ ಮೇಲೆ ತೀವ್ರವಾಗಿ ಹಲ್ಲೆ ಮಾಡಲಾಗಿದೆ. ಕೇಳಿದಷ್ಟು ಚಂದಾ ಕೊಡದಿರುವುದಕ್ಕೆ ನಾಲ್ಕೈದು ಯುವಕರು ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆ ಬೀದರ್ ನ ಮೈಲೂರು ಬಡಾವಣೆಯಲ್ಲಿ ನಡೆದಿದೆ.
ಮಹೇಶ್ ಎಂಬ ಯುವಕನಿಗೆ ಚಾಕುವಿನಿಂದ ತಿವಿದು ಹಲ್ಲೆ ಮಾಡಲಾಗಿದೆ. 10,000 ರೂ. ಚಂದಾ ಕೊಡುವಂತೆ ಯುವಕರು ಕೇಳಿದ್ದರು. ಅಷ್ಟೊಂದು ಹಣ ಕೊಡಲ್ಲ ಎಂದಿದ್ದಕ್ಕೆ ಮಹೇಶ್ ಮೇಲೆ ಹಲ್ಲೆ ಮಾಡಲಾಗಿದೆ. ಮಹೇಶ್ ಮೇಲೆ ವಿದ್ಯಾನಗರ ಬಡಾವಣೆಯ ಯುವಕರು ಹಲ್ಲೆ ಮಾಡಿದ್ದಾರೆ.
ಗಾಯಾಳು ಮಹೇಶ್ ನನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಯುವಕರು ಹಲ್ಲೆ ಮಾಡುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗಾಂಧಿ ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

