ಕಲಬುರಗಿ : ಸೋಶಿಯಲ್ ಮೀಡಿಯಾದಲ್ಲಿ ಫೋಟೋ ವೈರಲ್ ಮಾಡಿ ಕಿರುಕುಳ ನೀಡಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕುರಿಕೋಟ ಗ್ರಾಮದ ಬಳಿ ನಡೆದಿದೆ.
ಮೃತ ಯುವತಿಯನ್ನು ಕಮಲಾಪುರ ತಾಲೂಕಿನ ಭೂಸಣಗಿ ಗ್ರಾಮದ ಯುವತಿ ಸಾಕ್ಷಿ ಉಪ್ಪಾರ್ (22) ಎಂದು ಗುರುತಿಸಲಾಗಿದೆ. ಅಭಿಷೇಕ್ ಎಂಬಾತ ಯುವತಿಗೆ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.
ಯುವತಿ ಜೊತೆಗಿರುವ ಫೋಟೋಗಳನ್ನು ಅಭಿಷೇಕ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡಿದ್ದನು. ಇದರಿಂದ ಮನನೊಂದು ಯುವತಿ ಬೆಣ್ಣೆತೋರಾ ಡ್ಯಾಂಗೆ ಜಿಗಿದು ಸೂಸೈಡ್ ಮಾಡಿಕೊಂಡಿದ್ದಾಳೆ. ಮಹಾಗಾಂವ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
TAGGED:ಸೋಶಿಯಲ್ ಮೀಡಿಯಾ