HomeLatest NewsSHOCKING: ಒಣಗಿಸಲು ತಂತಿ ಮೇಲೆ ಬಟ್ಟೆ ಹಾಕುವಾಗಲೇ ಅವಘಡ: ವಿದ್ಯುತ್ ಸ್ಪರ್ಶಿಸಿ ದಂಪತಿ ಸ್ಥಳದಲ್ಲೇ ಸಾವು

SHOCKING: ಒಣಗಿಸಲು ತಂತಿ ಮೇಲೆ ಬಟ್ಟೆ ಹಾಕುವಾಗಲೇ ಅವಘಡ: ವಿದ್ಯುತ್ ಸ್ಪರ್ಶಿಸಿ ದಂಪತಿ ಸ್ಥಳದಲ್ಲೇ ಸಾವು

ಶಿವಮೊಗ್ಗ: ವಿದ್ಯುತ್ ಸ್ಪರ್ಶಿಸಿ ದಂಪತಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಗುರುವಾರ ಸಂಜೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಕಪ್ಪಗಳಲೆ ಗ್ರಾಮದಲ್ಲಿ ನಡೆದಿದೆ.

ವಿದ್ಯುತ್ ಸ್ಪರ್ಶಿಸಿ ಪತ್ನಿ ಒದ್ದಾಡುವುದನ್ನು ನೋಡಿದ ಪತಿ ರಕ್ಷಿಸಲು ಮುಂಡಾಗಿದ್ದು, ಇಬ್ಬರೂ ವಿದ್ಯುತ್ ಶಾಕ್ ನಿಂದ ಸಾವನ್ನಪ್ಪಿದ್ದಾರೆ.

ಕಪಗಳಲೆ ಗ್ರಾಮದ ಕೃಷ್ಣಪ್ಪ(55), ಅವರ ಪತ್ನಿ ವಿನೋದಾ(42) ಮೃತಪಟ್ಟವರು. ಮನೆಯ ಹೊರಗೆ ಬಟ್ಟೆ ಒಣಗಿಸಲು ಕಟ್ಟಿದ್ದ ಕಬ್ಬಿಣದ ತಂತಿಯ ಮೇಲೆ ಬಟ್ಟೆ ಹಾಕಲು ಹೋಗಿದ್ದಾಗ ಆ ತಂತಿಯಲ್ಲಿ ವಿದ್ಯುತ್ ಪ್ರವಹಿಸಿ ವಿನೋದಾ ಅವರಿಗೆ ತಗುಲಿದೆ. ಅವರನ್ನು ರಕ್ಷಿಸಲು ಹೋದ ಕೃಷ್ಣಪ್ಪ ಕೂಡ ಪತ್ನಿಯೊಂದಿಗೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೃಷ್ಣಪ್ಪ ಎಲೆಕ್ಟ್ರಿಷಿಯನ್ ಆಗಿದ್ದರು. ದಂಪತಿಗೆ ಒಬ್ಬ ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ. ಸೊರಬ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular