ಚಿತ್ರದುರ್ಗ: ಆಸ್ತಿ ವಿಚಾರಕ್ಕೆ ಜಗಳವಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಚಿತ್ರದುರ್ಗ ಜಿಲ್ಲೆಯ ಕಡ್ಲೇಗುದ್ದು ಗ್ರಾಮದಲ್ಲಿ ನಡೆದಿದೆ.
ವೀರಭದ್ರಪ್ಪ(55) ಕೊಲೆಯಾದ ವ್ಯಕ್ತಿ. 16 ವರ್ಷದ ಅಪ್ರಾಪ್ತ ಕೃತ್ಯವೆಸಗಿದ್ದಾನೆ. ದೊಡ್ಡಾಲಘಟ್ಟದಿಂದ ಜಮೀನಿಗೆ ಹೋಗುವ ರಸ್ತೆಯಲ್ಲಿ ಮಚ್ಚಿನಿಂದ ಹೊಡೆದು ವೀರಭದ್ರಪ್ಪನನ್ನು ಕೊಲೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಭರಮಸಾಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪ್ರಾಪ್ತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

