ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಹೀನ ಕೃತ್ಯ ನಡೆದಿರುವ ಘಟನೆ ಬೆಳಕಿಗೆ ಬಂದಿದ್ದು, ಕಾಮುಕನೋರ್ವ ಯುವತಿಯ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ.
ಹೌದು, ಈ ಒಂದು ಘಟನೆ ಮಾರತ್ತಹಳ್ಳಿಯಲ್ಲಿ ನಡೆದಿದ್ದು, ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಏಪ್ರಿಲ್ 30 ರಂದು ಈ ಘಟ ನೆ ನಡೆದಿದೆ. ರಾತ್ರಿ 11:30 ರ ವೇಳೆಗೆ ಯುವತಿ ಒಬ್ಬಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದರು. ಇದನ್ನು ಗಮನಿಸಿದ ಕಾಮುಕ ಯುವತಿಯ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ.
ಸದ್ಯ, ಕಾಮುಕನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ. ಒಟ್ಟಿನಲ್ಲಿ ಬೆಂಗಳೂರಲ್ಲಿ ಕಾಮುಕರ ಅಟ್ಟಹಾಸ ಮೀತಿ ಮೀರುತ್ತಿದ್ದು, ಒಂಟಿಯಾಗಿ ತಿರುಗುವ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ.
You Might Also Like
TAGGED:ಕಾಮುಕ