ಯಾದಗಿರಿ : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ವಸತಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಚಗೊಳಿಸಿದ ಘಟನೆ ಯಾದಗಿರಿ ವಸತಿ ಶಾಲೆಯಲ್ಲಿ ನಡೆದಿದೆ.
ಕಳೆದ ಕೆಲವು ತಿಂಗಳ ಹಿಂದೆ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ್ದ ಪ್ರಕರಣಗಳು ನಡೆದಿದ್ದವು. ನಂತರ ಸರ್ಕಾರ ಶಿಕ್ಷಕರಿಗೆ ಖಡಕ್ ಸೂಚನೆ ನೀಡಿತ್ತು. ಇದೀಗ ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ವಸತಿ ಶಾಲೆಯಲ್ಲಿ ಮಕ್ಕಳೇ ಪೊರಕೆ, ಬಕೆಟ್ ಹಿಡಿದು ಟಾಯ್ಲೆಟ್ ಸ್ವಚ್ಛ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಅರಕೇರ ಎಂಬ ಗ್ರಾಮದಲ್ಲಿ ನಡೆದಿದೆ.
ವಸತಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಮಾಡಿಸಿರುವ ಘಟನೆ ನಡೆದಿದ್ದು, ಶಾಲಾ ಮಕ್ಕಳೇ ಸ್ವಚ್ಛ ಮಾಡಿರುವ ವಿಡಿಯೋ ವೈರಲ್ ಆಗಿದೆ. ಕಸ್ತೂರಿ ಬಾ ಗಾಂಧಿ ಬಾಲಕಿಯರ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ . ವಿಡಿಯೋ ವೈರಲ್ ಆಗುತ್ತಿದ್ದಂತೆ ಶಾಲೆಗೆ ದೌಡಾಯಿಸಿದ ಪೋಷಕರು ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
You Might Also Like
TAGGED:ಅಮಾನವೀಯ ಘಟನೆ