ಹಾಸನ: ಹಾಸನ ಜಿಲ್ಲೆಯಲ್ಲಿ ಹಠಾತ್ ಹೃದಯಾಘಾತಕ್ಕೆ ಮತ್ತೊಬ್ಬರು ಬಲಿಯಾಗಿದ್ದಾರೆ. ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಆನಂದ್(44) ಮೃತಪಟ್ಟವರು.
ಹೊಳೆನರಸೀಪುರ ತಾಲೂಕಿನ ಕೊಂಗಲಬೀಡು ಗ್ರಾಮದಲ್ಲಿ ಘಟನೆ ನಡೆದಿದೆ. ಐಚನಹಳ್ಳಿ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ಆನಂದ್ ಕೊಂಗಲಬೀಡು ಗ್ರಾಮದ ಮನೆಯಲ್ಲಿ ರಾತ್ರಿ ಮಲಗಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಪತ್ನಿಯ ಬಳಿ ಎದೆ ನೋವು ಎಂದು ಹೇಳಿಕೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಆಟೋ ಕರೆ ತರುವಷ್ಟರಲ್ಲಿ ಆನಂದ್ ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಹಾಸನ ಜಿಲ್ಲೆಯಲ್ಲಿ ಒಂದೂವರೆ ತಿಂಗಳಿಂದ ಹೃದಯಘಾತಕ್ಕೆ 37 ಜನ ಸಾವನ್ನಪ್ಪಿದ್ದಾರೆ.