HomeLatest NewsSHOCKING: ಹಾಸನ ಜಿಲ್ಲೆಯಲ್ಲಿ 'ಹಠಾತ್ ಹೃದಯಾಘಾತ'ಕ್ಕೆ ಮತ್ತೊಬ್ಬರು ಬಲಿ

SHOCKING: ಹಾಸನ ಜಿಲ್ಲೆಯಲ್ಲಿ ‘ಹಠಾತ್ ಹೃದಯಾಘಾತ’ಕ್ಕೆ ಮತ್ತೊಬ್ಬರು ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಹಠಾತ್ ಹೃದಯಾಘಾತಕ್ಕೆ ಮತ್ತೊಬ್ಬರು ಬಲಿಯಾಗಿದ್ದಾರೆ. ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಆನಂದ್(44) ಮೃತಪಟ್ಟವರು.

ಹೊಳೆನರಸೀಪುರ ತಾಲೂಕಿನ ಕೊಂಗಲಬೀಡು ಗ್ರಾಮದಲ್ಲಿ ಘಟನೆ ನಡೆದಿದೆ. ಐಚನಹಳ್ಳಿ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ಆನಂದ್ ಕೊಂಗಲಬೀಡು ಗ್ರಾಮದ ಮನೆಯಲ್ಲಿ ರಾತ್ರಿ ಮಲಗಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಪತ್ನಿಯ ಬಳಿ ಎದೆ ನೋವು ಎಂದು ಹೇಳಿಕೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಆಟೋ ಕರೆ ತರುವಷ್ಟರಲ್ಲಿ ಆನಂದ್ ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಹಾಸನ ಜಿಲ್ಲೆಯಲ್ಲಿ ಒಂದೂವರೆ ತಿಂಗಳಿಂದ ಹೃದಯಘಾತಕ್ಕೆ 37 ಜನ ಸಾವನ್ನಪ್ಪಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular