ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಮಹಿಳೆ ಮೇಲೆ ಕಾಮುಕರು ಗ್ಯಾಂಗ್ ರೇಪ್ ನಡೆಸಿ ಅಟ್ಟಹಾಸ ಮೆರೆದಿದ್ದಾರೆ.
ದೊಡ್ಡ ನಾಗಮಂಗಲದ ಸಾಯಿ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಸ್ನೇಹಿತನ ಮನೆಗೆ ಬಂದಿದ್ದ ಮಹಿಳೆ ಮೇಲೆ ಕಾಮುಕರು ಅತ್ಯಾಚಾರ ಎಸಗಿದ್ದಾರೆ.
ಕಳೆದ ಮೂರು ದಿನಗಳ ಹಿಂದೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸ್ನೇಹಿತನ ಮನೆಗೆಂದು ಮಹಿಳೆ ಹೋಗಿದ್ದರು. ಈ ವೇಳೆ ಇಬ್ಬರು ವ್ಯಕ್ತಿಗಳು ಪೊಲೀಸರಿಗೆ ದೂರು ನೀಡುವುದಾಗಿ ಬೆದರಿಸಿ ಅತ್ಯಾಚಾರ ಎಸಗಿದ್ದಾರೆ.
ಅತ್ಯಾಚಾರ ಎಸಗಿದ ಆರೋಪಿಗಳು ನಂತರ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆ. ಹಣ ಪಡೆದ ಕಿರಾತಕರು ಮಹಿಳೆ ಹಾಗೂ ಆತನ ಮೊಬೈಲ್ ಕಸಿದುಕೊಂಡಿದ್ದಾರೆ. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮೂವರು ಶಂಕಿತ ಆರೋಪಿಗಳನ್ನು ಬಂಧಿಸಿದ್ದಾರೆ.
You Might Also Like
TAGGED:ಪೈಶಾಚಿಕ ಕೃತ್ಯ