ರಾಮನಗರ : ರಾಮನಗರದಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಎಸಗಲಾಗಿದ್ದು, ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ಠಾಣೆ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ.
ಮಾಗಡಿ ಪೊಲೀಸರು ಆರೋಪಿಗಳನ್ನ ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಬಂಧಿತರನ್ನ ವಿಕಾಸ್, ಪ್ರಶಾಂತ್, ಚೇತನ್ ಎಂದು ಗುರುತಿಸಲಾಗಿದೆ.
ಬೆಂಗಳೂರಿನ ಕಾಲೇಜಿನಲ್ಲಿ 19 ವರ್ಷದ ಯುವತಿ ಓದುತ್ತಿದ್ದಳು. ವಿಕಾಸ್ ಎಂಬಾತ ಮೊದಲು ಯುವತಿಯನ್ನ ಪರಿಚಯ ಮಾಡಿಕೊಂಡು ಆಕೆಯ ಜೊತೆ ಲೈಂಗಿಕ ಕ್ರಿಯೆ ನಡೆಸಿದ್ದನು. ಅದನ್ನ ವಿಡಿಯೋ ಮಾಡಿಕೊಂಡ ವಿಕಾಸ್ ನಾನು ಕರೆದಾಗಲೆಲ್ಲಾ ಬರಬೇಕು , ಇಲ್ಲವಾದಲ್ಲಿ ವಿಡಿಯೋ ವೈರಲ್ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದನು. ಈ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿದ ವಿಕಾಸ್ ಸ್ನೇಹಿತರಾದ ಪ್ರಶಾಂತ್ ಚೇತನ್ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಇದರಿಂದ ಮನನೊಂದ ವಿದ್ಯಾರ್ಥಿನಿ ಮಾಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ.

