SHOCKING : ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ : ಪ್ರೇಯಸಿಯನ್ನು ಕೊಂದು ದೇಹವನ್ನು 50 ತುಂಡುಗಳಾಗಿ ಕತ್ತರಿಸಿದ ಯುವಕ.!

ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ವರದಿಯಾಗಿದ್ದು, ಯುವಕನೋರ್ವ ತನ್ನ ಪ್ರೇಯಸಿಯನ್ನು ಕೊಂದು ದೇಹವನ್ನು 50 ತುಂಡುಗಳಾಗಿ ಕತ್ತರಿಸಿದ ಘಟನೆ ರಾಂಚಿಯಲ್ಲಿ ನಡೆದಿದೆ.

ಕಸಾಯಿ ಖಾನೆಯಲ್ಲಿ ಮಾಂಸ ಕತ್ತರಿಸುವ ಕೆಲಸ ಮಾಡುತ್ತಿದ್ದ 25 ವರ್ಷದ ವ್ಯಕ್ತಿಯೊಬ್ಬ ತನ್ನ ಲಿವ್-ಇನ್ ಸಂಗಾತಿಯನ್ನು ಕತ್ತು ಹಿಸುಕಿ ಕೊಂದು ಆಕೆಯ ದೇಹವನ್ನು 40 ರಿಂದ 50 ತುಂಡುಗಳಾಗಿ ಕತ್ತರಿಸಿದ ಘಟನೆ ಜಾರ್ಖಂಡ್ ಖುಂಟಿ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಡೆದಿದೆ .ಆರೋಪಿಯನ್ನು ನರೇಶ್ ಭೆಂಗ್ರಾ ಎಂದು ಗುರುತಿಸಲಾಗಿದ್ದು, ಆತನನ್ನು ಬಂಧಿಸಲಾಗಿದೆ.

ನವೆಂಬರ್ 24 ರಂದು ಜರಿಯಾಘರ್ ಪೊಲೀಸ್ ಠಾಣೆಯ ಜೋರ್ಡಾಗ್ ಗ್ರಾಮದ ಬಳಿ ಬೀದಿ ನಾಯಿ ಮಾಂಸವನ್ನು ತಿನ್ನುತ್ತಿದ್ದಾಗ ಘಟನೆ ಬೆಳಕಿಗೆ ಬಂದಿದೆ.ನರೇಶ್ ಭೆಂಗ್ರಾ ಕಳೆದ ಎರಡು ವರ್ಷಗಳಿಂದ ತಮಿಳುನಾಡಿನ ಖುಂಟಿ ಜಿಲ್ಲೆಯ 24 ವರ್ಷದ ಮಹಿಳೆಯೊಂದಿಗೆ ಲಿವ್-ಇನ್ ಸಂಬಂಧದಲ್ಲಿದ್ದರು.

ಅವನು ಅವಳನ್ನು ಜೋರ್ಡಾಗ್ ಗ್ರಾಮದ ತನ್ನ ಮನೆಯ ಬಳಿಯ ಕಾಡಿಗೆ ಕರೆದೊಯ್ದು ಈ ಕೃತ್ಯ ಎಸಗಿದ್ದಾನೆ. ಈ ವ್ಯಕ್ತಿ ತಮಿಳುನಾಡಿನ ಕಸಾಯಿಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಚಿಕನ್ ಕತ್ತರಿಸುವುದರಲ್ಲಿ ಪರಿಣತನಾಗಿದ್ದ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read