HomeLatest NewsSHOCKING: ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಬ್ಬ ಯುವಕ ಬಲಿ: ಮನೆಯಲ್ಲೇ ಕುಸಿದುಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

SHOCKING: ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಬ್ಬ ಯುವಕ ಬಲಿ: ಮನೆಯಲ್ಲೇ ಕುಸಿದುಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಮಂಡ್ಯ: ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಬ್ಬ ಯುವಕ ಬಲಿಯಾಗಿದ್ದಾರೆ. ಇಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿ ಹೃದಯಾಘತದಿಂದ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಕರೋಟಿ ಗ್ರಾಮದಲ್ಲಿ ನಡೆದಿದೆ.

21 ವರ್ಷದ ನವೀನ್ ಮೃತಪಟ್ಟ ವಿದ್ಯಾರ್ಥಿ ಎಂದು ಹೇಳಲಾಗಿದೆ. ಬೆಂಗಳೂರಿನ ಕಾಲೇಜ್ ವೊಂದರಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ನವೀನ್ ರಜೆ ಇದ್ದ ಕಾರಣ ಊರಿಗೆ ಬಂದಿದ್ದ. ಮನೆಯಲ್ಲಿ ಇದ್ದಾಗಲೇ ಹಠಾತ್ ಹೃದಯಘಾತವಾಗಿ ನವೀನ್ ಕುಸಿದು ಬಿದ್ದಿದ್ದಾನೆ. ಕೂಡಲೇ ಪೋಷಕರು ಕಿಕ್ಕೇರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆಸ್ಪತ್ರೆಯ ಸಿಬ್ಬಂದಿ ಚನ್ನರಾಯಪಟ್ಟಣಕ್ಕೆ ಕರೆದುಕೊಂಡು ಹೋಗುವಂತೆ ಹೇಳಿದ್ದು, ಚನ್ನರಾಯಪಟ್ಟಣಕ್ಕೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲೇ ನವೀನ್ ಕೊನೆಯುಸಿರೆಳೆದಿದ್ದಾರೆ.

ಕಿಕ್ಕೇರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದರೆ ನವೀನ್ ಬದುಕುತ್ತಿದ್ದ. ಪ್ರಾಥಮಿಕ ಚಿಕಿತ್ಸೆ ನೀಡದಿರುವುದೇ ಪುತ್ರನ ಸಾವಿಗೆ ಕಾರಣವೆಂದು ಪೋಷಕರು ಆರೋಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular