HomeLatest NewsSHOCKING: ನಡುರಸ್ತೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಆಟೋ ಚಾಲಕ...!

SHOCKING: ನಡುರಸ್ತೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಆಟೋ ಚಾಲಕ…!

ಚಿತ್ರದುರ್ಗ: ಟ್ರಾಫಿಕ್ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಆಟೋ ಚಾಲಕ ನಡು ರಸ್ತೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಚಿತ್ರದುರ್ಗ ತಾಲೂಕಿನ ಮಾಳವಟ್ಟಿ ಗ್ರಾಮದ ತಿಪ್ಪೇಸ್ವಾಮಿ ಆತ್ಮಹತ್ಯೆಗೆ ಯತ್ನಿಸಿದವರು. ಚಿತ್ರದುರ್ಗದ ಗಾಂಧಿ ಸರ್ಕಲ್ ನಲ್ಲಿ ರಸ್ತೆಯಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪೊಲೀಸರು ಆಟೋ ತಡೆದು ಕಿರುಕುಳ ನೀಡಿ ಲಂಚ ಕೇಳಿದ್ದಕ್ಕೆ ಈ ರೀತಿ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ತೀವ್ರ ಸುಟ್ಟ ಗಾಯಗಳಾಗಿರುವ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕುಡಿದು ಆಟೋ ಚಾಲನೆ, ಸಮವಸ್ತ್ರ ಇಲ್ಲದಿರುವುದು, ನಿಯಮ ಉಲ್ಲಂಘನೆ ಬಗ್ಗೆ ಸಂಚಾರ ಪೊಲೀಸರು ಪ್ರಶ್ನಿಸಿದ್ದರು. ಈ ಬಗ್ಗೆ ಆಕ್ಷೇಪಿಸಿದ್ದ ತಿಪ್ಪೇಸ್ವಾಮಿ ವಿಡಿಯೋ ಮಾಡಿದ್ದರು. ಇದು ವಿಕೋಪಕ್ಕೆ ತಿರುಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular