HomeLatest NewsSHOCKING: ಬೆಳಗಾವಿ ವಿದ್ಯಾರ್ಥಿನಿಗೆ ಮತ್ತು ಬರುವ ಪಾನೀಯ ನೀಡಿ ಸ್ನೇಹಿತರಿಂದಲೇ ಸಾಮೂಹಿಕ ಅತ್ಯಾಚಾರ

SHOCKING: ಬೆಳಗಾವಿ ವಿದ್ಯಾರ್ಥಿನಿಗೆ ಮತ್ತು ಬರುವ ಪಾನೀಯ ನೀಡಿ ಸ್ನೇಹಿತರಿಂದಲೇ ಸಾಮೂಹಿಕ ಅತ್ಯಾಚಾರ

ಮುಂಬೈ: ಬೆಳಗಾವಿ ಮೂಲದ ಎಂಬಿಬಿಎಸ್ ವಿದ್ಯಾರ್ಥಿನಿ ಮೇಲೆ ಸ್ನೇಹಿತರೇ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಮೇ 18ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಮೇ 27ರವರೆಗೆ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ವಹಿಸಿ ನ್ಯಾಯಾಲಯ ಆದೇಶಿಸಿದೆ.

ಮೇ 18ರಂದು ರಾತ್ರಿ 10 ಗಂಟೆಗೆ ಸ್ನೇಹಿತರೊಂದಿಗೆ ಸಿನಿಮಾ ವೀಕ್ಷಿಸಲು ಎಂಬಿಬಿಎಸ್ ವಿದ್ಯಾರ್ಥಿನಿ ನಿರ್ಧರಿಸಿ ಅವರ ಅಪಾರ್ಟ್ಮೆಂಟ್ ಗೆ ತೆರಳಿದ್ದಾಳೆ. ಈ ವೇಳೆ ಕುಡಿದ ಮತ್ತಿನಲ್ಲಿದ್ದ ಸ್ನೇಹಿತರು ಸಂತ್ರಸ್ತೆಗೆ ಮತ್ತು ಬರಿಸುವ ಪಾನಿಯ ನೀಡಿದ್ದಾರೆ. ಆಕೆ ಪ್ರಜ್ಞೆ ತಪ್ಪಿದ ನಂತರ ಅತ್ಯಾಚಾರ ಎಸಗಿ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ. ನಂತರ ಸಂತ್ರಸ್ತೆ ಬೆಳಗಾವಿಯಲ್ಲಿದ್ದ ಪೋಷಕರಿಗೆ ಮಾಹಿತಿ ನೀಡಿದ್ದು, ಕೂಡಲೇ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular