ಮಡಿಕೇರಿ: ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಗಲೇ ಹೃದಯಾಘಾತದಿಂದ ಕ್ಷೇತ್ರ ಶಿಕ್ಷಣಾಧಿಕಾರಿ(ಬಿಇಒ) ಮೃತಪಟ್ಟಿದ್ದಾರೆ. ಮೈಸೂರಿನಿಂದ ಬಸ್ ನಲ್ಲಿ ವಿರಾಜಪೇಟೆಗೆ ತೆರಳುತ್ತಿದ್ದ ಬಿಇಒ ಆನಂದ್ ಪಿ.ಜೆ.(55) ಮೃತಪಟ್ಟವರು. ವಿರಾಜಪೇಟೆಯ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿರುವ ಆನಂದ್ ಮೈಸೂರಿನ ವಿಜಯನಗರದಲ್ಲಿ ವಾಸವಾಗಿದ್ದಾರೆ. ಕಚೇರಿಗೆ ತೆರಳಲು ಮೈಸೂರಿನಿಂದ ವಿರಾಜಪೇಟೆಗೆ ಬಸ್ ನಲ್ಲಿ ಹೊರಟಿದ್ದರು.
ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಗಲೇ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಮೈಸೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಆನಂದ್ ಕೊನೆಯುಸಿರೆಳೆದಿದ್ದಾರೆ. ಅವರಿಗೆ ಪತ್ನಿ, ಪುತ್ರಿ, ಪುತ್ರ ಮಗ ಇದ್ದಾರೆ. ಮೃತರ ಗೌರವಾರ್ಥ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು.

