HomeLatest NewsSHOCKING: ಮಂಗನ ಕಾಯಿಲೆಯಿಂದ ಬಾಲಕ ಸಾವು

SHOCKING: ಮಂಗನ ಕಾಯಿಲೆಯಿಂದ ಬಾಲಕ ಸಾವು

ಕಾರವಾರ: ಮಂಗನ ಕಾಯಿಲೆಯಿಂದ ಬಾಲಕ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಮಂಗನ ಕಾಯಿಲೆಗೆ ತುತ್ತಾಗಿ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಅವರ್ಸಾ ಗ್ರಾಮದ ಬಾಲಕ ಆರವ್(11) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಅವರ್ಸಾದ ಬಾಲಕ ಆರವ್ ಗೆ ಕ್ಯಾಸನೂರು ಫಾರೆಸ್ಟ್ ಡಿಸೀಸ್(ಕೆ.ಎಫ್.ಡಿ.) ಇರುವುದಾಗಿ ಏಪ್ರಿಲ್ ನಲ್ಲಿ ವೈದ್ಯರು ದೃಢಪಡಿಸಿದ್ದರು. ಆರವ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ ಗೆ ಕರೆದೊಯ್ಯಲು ಯೋಜಿಸಲಾಗಿತ್ತು. ಈ ನಡುವೆ ಆರವ್ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular