HomeLatest NewsSHOCKING: ಮದುವೆಯಾಗದಿದ್ದಕ್ಕೆ ಮನನೊಂದು ಮದ್ಯದೊಂದಿಗೆ ವಿಷ ಸೇವಿಸಿ ಸಹೋದರರು ಆತ್ಮಹತ್ಯೆ

SHOCKING: ಮದುವೆಯಾಗದಿದ್ದಕ್ಕೆ ಮನನೊಂದು ಮದ್ಯದೊಂದಿಗೆ ವಿಷ ಸೇವಿಸಿ ಸಹೋದರರು ಆತ್ಮಹತ್ಯೆ

ಬೆಳಗಾವಿ: ಮದುವೆಯಾಗದಿದ್ದಕ್ಕೆ ಜಿಗುಪ್ಸೆಗೊಂಡು ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಕೋಣನಕೇರಿ ಗ್ರಾಮದಲ್ಲಿ ನಡೆದಿದೆ.

ಸಂತೋಷ ರವೀಂದ್ರ ಗುಂಡೆ(55), ಅಣ್ಣಾ ಸಾಹೇಬ ರವೀಂದ್ರ ಗುಂಡೆ(50) ಮೃತಪಟ್ಟ ಸಹೋದರರು. ಇವರಿಗೆ ಮದುವೆಯಾಗಿರಲಿಲ್ಲ. ಇದರಿಂದ ಮನನೊಂದು ಮದ್ಯ ಸೇವನೆಯ ಚಟಕ್ಕೆ ಬಿದ್ದಿದ್ದರು. ಕುಡಿತದ ನಶೆಯಲ್ಲಿ ವಿಷಕಾರಿ ಪದಾರ್ಥ ಸೇವನೆ ಮಾಡ ಅಸ್ವಸ್ಥರಾಗಿದ್ದ ಇಬ್ಬರನ್ನು ಕೂಡಲೇ ಮಹಾರಾಷ್ಟ್ರದ ಗಡಹಿಂಗ್ಲಜ್ ಪಟ್ಟಣದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾದ ಮೃತಪಟ್ಟಿದ್ದಾರೆ. ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular