HomeLatest NewsSHOCKING: ಡಿವೈಡರ್ ಗೆ ಡಿಕ್ಕಿಯಾಗಿ ಕಾರ್ ಗೆ ಬೆಂಕಿ: ಲೋಕಾಯುಕ್ತ ಇನ್ಸ್ ಪೆಕ್ಟರ್ ಸಜೀವ ದಹನ

SHOCKING: ಡಿವೈಡರ್ ಗೆ ಡಿಕ್ಕಿಯಾಗಿ ಕಾರ್ ಗೆ ಬೆಂಕಿ: ಲೋಕಾಯುಕ್ತ ಇನ್ಸ್ ಪೆಕ್ಟರ್ ಸಜೀವ ದಹನ

ಧಾರವಾಡ: ಇತ್ತೀಚೆಗಷ್ಟೇ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಕಾರ್ ಅಪಘಾತದಲ್ಲಿ ಮೃತಪಟ್ಟಿದ್ದರು. ಈ ಪ್ರಕರಣ ಮಾಸುವ ಮೊದಲೇ ಮತ್ತೊಂದು ಘಟನೆ ಮರುಕಳಿಸಿದೆ. ಕಾರ್ ಅಪಘಾತದಲ್ಲಿ ಲೋಕಾಯುಕ್ತ ಇನ್ಸ್ ಪೆಕ್ಟರ್ ಸಾವನ್ನಪ್ಪಿದ್ದಾರೆ.

ಕಾರ್ ಡಿವೈಡರ್ ಗೆ ಡಿಕ್ಕಿಯಾಗಿ ನಡುರಸ್ತೆಯಲ್ಲಿ ಹೊತ್ತಿ ಉರಿದಿದ್ದು ಲೋಕಾಯುಕ್ತ ಇನ್ಸ್ ಪೆಕ್ಟರ್ ಸಜೀವ ದಹನವಾಗಿದ್ದಾರೆ. ಧಾರವಾಡ ಜಿಲ್ಲೆ ಅಣ್ಣಿಗೇರಿ ಪಟ್ಟಣದ ಹೊರ ವಲಯದಲ್ಲಿ ಘಟನೆ ನಡೆದಿದೆ.

ಹಾವೇರಿ ಲೋಕಾಯುಕ್ತ ಇನ್ಸ್ ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಮೃತಪಟ್ಟವರು. ಕಾರ್ ನಲ್ಲಿಯೇ ಅವರು ಸುಟ್ಟು ಕರಕಲಾಗಿದ್ದಾರೆ. ಡಿಸೆಂಬರ್ 5ರಂದು i20 ಕಾರ್ ನಲ್ಲಿ ಗದಗ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಕಾರ್ ಡಿಕ್ಕಿಯಾಗಿದೆ. ಈ ವೇಳೆ ಬೆಂಕಿ ಹೊತ್ತಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದ್ದರಿಂದ ಪಂಚಾಕ್ಷರಿ ಅವರಿಗೆ ಕಾರ್ ಲಾಕ್ ತೆಗೆದು ಹೊರಬರಲು ಸಾಧ್ಯವಾಗಿಲ್ಲ. ಕಾರ್ ನೊಳಗೆ ಸುಟ್ಟು ಕರಕಲಾಗಿದ್ದಾರೆ. ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ಅಣ್ಣಿಗೇರಿ ಠಾಣೆ ಪೋಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ. ಈ ವೇಳೆಗಾಗಲೇ ಪಂಚಾಕ್ಷರಿ ಮೃತಪಟ್ಟಿದ್ದರು ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular