ಉಡುಪಿ: ಜೋಲಿಗಾಗಿ ಕಟ್ಟಿದ್ದ ಸೀರೆ ಕುತ್ತಿಗೆಗೆ ಸುತ್ತಿಕೊಂಡು ಒಂದು ವರ್ಷದ ಮಗು ಸಾವನ್ನಪ್ಪಿದ ಘಟನೆ ಉಡುಪಿ ಪುತ್ತೂರು ಗ್ರಾಮದ ನಿಟ್ಟೂರಿನಲ್ಲಿ ನಡೆದಿದೆ.
ಅಯ್ಯಪ್ಪ ಎಂಬುವವರ ಹೆಣ್ಣು ಮಗು ಕಾಳಮ್ಮ(1) ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ. ಅಯ್ಯಪ್ಪ ಕಳೆದ ಮೂರು ವರ್ಷದಿಂದ ಉಡುಪಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಬುಧವಾರ ಬೆಳಗ್ಗೆ ಅವರ ಪತ್ನಿ ಜೋಲಿಯಲ್ಲಿ ಮಗು ಮಲಗಿಸಿ ಕೆಲಸಕ್ಕೆ ಮನೆಯಿಂದ ಹೊರಗೆ ಹೋಗಿದ್ದಾರೆ. ವಾಪಸ್ ಬಂದಾಗ ಜೋಳಿಗೆ ಕಟ್ಟಿದ್ದ ಸೀರೆ ಕುತ್ತಿಗೆಗೆ ಸುತ್ತಿಕೊಂಡು ಮಗು ಸಾವನ್ನಪ್ಪಿರುವುದು ಕಂಡು ಬಂದಿದೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.