HomeLatest NewsSHOCKING: ಆಸ್ಪತ್ರೆ ಶೌಚಾಲಯದಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ ಮಗುವಿನ ಶವ ಪತ್ತೆ

SHOCKING: ಆಸ್ಪತ್ರೆ ಶೌಚಾಲಯದಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ ಮಗುವಿನ ಶವ ಪತ್ತೆ

ಶಿವಮೊಗ್ಗ: ಆಸ್ಪತ್ರೆ ಶೌಚಾಲಯದಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ ಮಗುವಿನ ಶವ ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲಾ ಆಸ್ಪತ್ರೆಯ ಶರಾವತಿ ವಾರ್ಡ್ ನಲ್ಲಿ ಮಗುವಿನ ಶವ ಪತ್ತೆಯಾಗಿದ್ದು, ಮಗುವಿನ ಹೊತ್ತು ಕೊಯ್ದು ಶೌಚಾಲಯದಲ್ಲಿ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ.

ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಶೌಚಾಲಯದಲ್ಲಿ ಶಿಶುವಿನ ಶವ ಪತ್ತೆಯಾಗಿದೆ. ಆಸ್ಪತ್ರೆಗೆ ಭೇಟಿ ನೀಡಿದ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಶೀಲಾ ಎಂಬುವವರ ಮೇಲೆ ಪೊಲೀಸ್ ಅಧಿಕಾರಿಗಳಿಗೆ ಅನುಮಾನ ಉಂಟಾಗಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ತಿಮ್ಲಾಪುರ ಗ್ರಾಮದ ಶೀಲಾ ಎಂಬುವವರಿಗೆ ಇಂದು ಹೆರಿಗೆಯಾಗಿತ್ತು. ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular