ಬೆಂಗಳೂರು : ‘ಬಾಡೂಟ ಭಾಗ್ಯ’ಕ್ಕೂ ಮುನ್ನ ಬೀದಿ ನಾಯಿಗಳು ಮನುಷ್ಯನ ಮಾಂಸದ ರುಚಿ ನೋಡಿದೆ.
ಹೌದು, ಬೆಂಗಳೂರಿನಲ್ಲಿ ರಕ್ಕಸ ಬೀದಿನಾಯಿಗಳ ದಾಳಿಗೆ ವೃದ್ಧರೊಬ್ಬರು ಬಲಿಯಾಗಿದ್ದು, ನಾಯಿಗಳ ಡೆಡ್ಲಿ ಅಟ್ಯಾಕ್ ಗೆ ವೃದ್ದರೊಬ್ಬರು ಬಲಿಯಾಗಿದ್ದಾರೆ.
ಬೆಂಗಳೂರಿನ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸೀತಪ್ಪ (71) ಎಂಬ ವ್ಯಕ್ತಿ ಬೀದಿನಾಯಿಗಳ ದಾಳಿಯಿಂದ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ವಾಕಿಂಗ್ ಹೋಗುತ್ತಿದ್ದ ಸೀತಪ್ಪನ ಮೇಲೆ ದಾಳಿ ನಡೆಸಿದ ನಾಯಿಗಳು ಸೀತಪ್ಪನ ದೇಹದ ಭಾಗಗಳನ್ನು ಕಚ್ಚಿ ತಿಂದಿದೆ. ಗಂಭೀರವಾಗಿ ಗಾಯಗೊಂಡಿದ್ದ ಸೀತಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಬೀದಿ ನಾಯಿಗಳಿಗೆ ಕಾಂಗ್ರೆಸ್ ಸರ್ಕಾರ ಬಾಡೂಟ ಕಲ್ಪಿಸಲು ಮುಂದಾಗಿದೆ.ಬೀದಿ ನಾಯಿಗಳಿಗೆ ಮಾಂಸ, ಚಿಕನ್, ಎಗ್ ರೈಸ್ ನೀಡಲು ಬಿಬಿಎಂಪಿ ಮುಂದಾಗಿದೆ. ಪಾಲಿಕೆಯ 8 ವಲಯಗಳಲ್ಲಿ ಪ್ರತಿದಿನ 600 ರಿಂದ 700 ಬೀದಿ ನಾಯಿಗಳಿಗೆ ಬಾಡೂಟ ನೀಡಲು ಬಿಬಿಎಂಪಿ 2.80 ಕೋಟಿ ರೂ. ಟೆಂಡರ್ ಕರೆದಿದೆ. ಬಿಬಿಎಂಪಿಯ ಈ ಕ್ರಮಕ್ಕೆ ತೆರಿಗೆದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನರ ತೆರಿಗೆಯ ಹಣವನ್ನು ಈ ರೀತಿ ಬೀದಿ ನಾಯಿಗಳಿಗೆ ಬಾಡೂಟ ಹಾಕಲು ಪೋಲು ಮಾಡುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.