ಮಂಜೇಶ್ವರ : ಗಂಟಲಲ್ಲಿ ಆಮ್ಲೆಟ್ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಂತಹ ಘಟನೆ ಮಂಜೇಶ್ವರದ ಬದಿಯಡ್ಕದಲ್ಲಿ ನಡೆದಿದೆ.
ಮೃತರನ್ನು 52 ವರ್ಷದ ವಿನ್ಸೆಂಟ್ ಕ್ರಾಸ್ತಾ ಎಂದು ಗುರುತಿಸಲಾಗಿದೆ. ವಿನ್ಸೆಂಟ್ ಗೂಡಂಗಡಿಯಲ್ಲಿ ಆಮ್ಲೆಟ್ ತಿನ್ನುತ್ತಿದ್ದಾಗ ಈ ದುರಂತ ಸಂಭವಿಸಿದೆ. ಆಮ್ಲೆಟ್ ಗಂಟಲಲ್ಲಿ ಸಿಲುಕಿ ಉಸಿರಾಡಲು ಒದ್ದಾಡುತ್ತಿದ್ದ ವಿನ್ಸೆಂಟ್ ರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಕೂಡ ಅಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ.
ಬದಿಯಡ್ಕ ಠಾಣಾ ಪೊಲೀಸರು ಮಹಜರು ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.