HomeLatest NewsSHOCKING: ಕುಡಿದ ಮತ್ತಿನಲ್ಲಿ ಕತ್ತು ಕೊಯ್ದುಕೊಂಡು ವ್ಯಕ್ತಿ ಆತ್ಮಹತ್ಯೆ

SHOCKING: ಕುಡಿದ ಮತ್ತಿನಲ್ಲಿ ಕತ್ತು ಕೊಯ್ದುಕೊಂಡು ವ್ಯಕ್ತಿ ಆತ್ಮಹತ್ಯೆ

ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಕತ್ತು ಕೊಯ್ದುಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಮಾರಶೆಟ್ಟಿಹಳ್ಳಿಯಲ್ಲಿ ಶನಿವಾರ ರಾತ್ರಿ ನಡೆದಿದೆ.

ರಮೇಶ್(40) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮಿಲ್ಟ್ರಿ ಹೋಟೆಲ್ ನಡೆಸುತ್ತಿದ್ದ ರಮೇಶ್ ಹೋಟೆಲ್ ಪಕ್ಕದಲ್ಲಿ ಇದ್ದ ಶೌಚಾಲಯದಲ್ಲಿ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈತನಿಗೆ ಕುಡಿತದ ಚಟವಿದ್ದು, ಇದನ್ನು ಬಿಡಿಸಲು ಕುಟುಂಬದವರು ಸಾಕಷ್ಟು ಪ್ರಯತ್ನಪಟ್ಟಿದ್ದರು. ಈ ಹಿಂದೆಯೂ ರಮೇಶ್ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ಹೇಳಲಾಗಿದೆ.

ಶನಿವಾರ ರಾತ್ರಿ ಹೋಟೆಲ್ ನಲ್ಲಿ ಇದ್ದ ಚಾಕು ತೆಗೆದುಕೊಂಡು ಶೌಚಾಲಯಕ್ಕೆ ಹೋದ ರಮೇಶ್ ಕತ್ತು ಸೀಳಿಕೊಂಡಿದ್ದಾನೆ. ಬಹುಹೊತ್ತಿನವರೆಗೆ ಆತ ಬರದಿದ್ದಾಗ ಕುಟುಂಬದವರು, ಗ್ರಾಮಸ್ಥರು ಹುಡುಕಾಡಿದಾಗ ಶೌಚಾಲಯದಲ್ಲಿ ಮೃತಪಟ್ಟಿರುವುದು ಗೊತ್ತಾಗಿದೆ. ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular