HomeLatest NewsSHOCKING: ಕಬ್ಬಿನ ಗದ್ದೆಯಲ್ಲಿ ಬೆಂಕಿ ನಂದಿಸಲು ಹೋದ ರೈತ ಸಜೀವ ದಹನ

SHOCKING: ಕಬ್ಬಿನ ಗದ್ದೆಯಲ್ಲಿ ಬೆಂಕಿ ನಂದಿಸಲು ಹೋದ ರೈತ ಸಜೀವ ದಹನ

ವಿಜಯಪುರ: ಕಬ್ಬಿನ ಗದ್ದೆಯಲ್ಲಿ ಬೆಂಕಿ ನಂದಿಸಲು ಹೋದ ರೈತರೊಬ್ಬರು ಸಜೀವ ದಹನವಾದ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಪಿಎ ಬನ್ನೆಟ್ಟಿ ಗ್ರಾಮದಲ್ಲಿ ನಡೆದಿದೆ.

ಮಲ್ಲನಗೌಡ ಬಿರಾದಾರ(62) ಮೃತಪಟ್ಟವರು. ಶುಕ್ರವಾರ ಕಬ್ಬಿನ ಗದ್ದೆಗೆ ಬೆಂಕಿ ಬಿದ್ದಿದ್ದು, ಇದನ್ನು ನಂದಿಸಲು ಹೋದ ಮಲ್ಲನಗೌಡ ಸಜೀವ ದಹನವಾಗಿದ್ದಾರೆ. ಹೊಲಕ್ಕೆ ಬೆಂಕಿ ಬಿದ್ದ ವಿಚಾರ ಗೊತ್ತಾದ ಕೂಡಲೇ ಸ್ಥಳಕ್ಕೆ ತೆರಳಿದ ಮಲ್ಲನಗೌಡ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಅವರಿಗೂ ಬೆಂಕಿ ತಗುಲಿ ಸಜೀವ ದಹನವಾಗಿದ್ದಾರೆ ಎನ್ನಲಾಗಿದೆ. ದೇವರಹಿಪ್ಪರಗಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular