ಮೈಸೂರು: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ಬೋಗಾದಿ ಎರಡನೇ ಹಂತದಲ್ಲಿ ನಡೆದಿದೆ.
ಸಾಲಭಾದೆಯಿಂದ ಬೇಸತ್ತು ರೈತ ಶಿವಕುಮಾರ್(35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜುಲೈ 19ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹೆಚ್.ಡಿ. ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದ ರೈತ ಶಿವಕುಮಾರ್ ಕೃಷಿಗಾಗಿ ಕೈಸಾಲ ಮಾಡಿಕೊಂಡಿದ್ದರು. ಬೆಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಸಾಲಬಾಧೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

