ಹಾಸನ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೀನಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಐದು ಜನ ಗಾಯಗೊಂಡಿದ್ದಾರೆ.
ಐವರು ಮಹಿಳೆಯರಿಗೆ ಸಿಡಿಲು ಬಡಿದು ಗಂಭೀರ ಗಾಯವಾಗಿದೆ. ದೀನಹಳ್ಳಿ ಹೊರವಲಯದಲ್ಲಿ ಘಟನೆ ನಡೆದಿದೆ. ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದಿದೆ. ರೂಪಾ, ಲಕ್ಷ್ಮೀ, ಸುಮಿತ್ರಾ, ಜಯಮ್ಮ ಸೇರಿ ಐದು ಜನ ಮಹಿಳೆಯರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಕಲೇಶಪುರ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

